Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರು ಆ ಬೆಳಕನ್ನು ಒಳ್ಳೇದೆಂದು ನೋಡಿದನು. ದೇವರು ಬೆಳಕನ್ನೂ ಕತ್ತಲೆಯನ್ನೂ ಬೇರೆ ಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ಬೆಳಕನ್ನು ಒಳ್ಳೆಯದೆಂದು ಕಂಡರು. ದೇವರು ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:4
10 ತಿಳಿವುಗಳ ಹೋಲಿಕೆ  

ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು.


ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.


ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.


ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.


ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.


ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.


ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.


ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು