Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೋಹನ ಮಕ್ಕಳಾದ ಶೇಮ್ ಹಾಮ್ ಯೆಫೆತರ ವಂಶದವರ ಚರಿತ್ರೆಯು - ಜಲಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:1
12 ತಿಳಿವುಗಳ ಹೋಲಿಕೆ  

ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.


ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.


ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.


ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.


ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.


ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.


ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು.


ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.


ಆದಾಮನ ಸಂತಾನದವರು; ಸೇತ್, ಎನೋಷ್,


ನೋಹ, ಶೇಮ್, ಹಾಮ್, ಯೆಫೆತ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು