Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:22
19 ತಿಳಿವುಗಳ ಹೋಲಿಕೆ  

ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,


ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.


ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’


ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.


ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು;


ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.


ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.


ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”


ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು