Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಬರನಿಗೆ ಇಬ್ಬರು ಮಕ್ಕಳು. ಒಬ್ಬನಿಗೆ ಪೆಲೆಗೆಂಬ ಹೆಸರು. ಇವನ ಕಾಲದಲ್ಲೇ ಭೂಜನದ ವಿಭಜನೆ ಆದುದು. ಅವನ ತಮ್ಮನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂವಿುಯ ಜನಗಳು ವಿಂಗಡವಾದವು. ಅವನ ತಮ್ಮನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:25
10 ತಿಳಿವುಗಳ ಹೋಲಿಕೆ  

ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.


ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.


ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.


ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ,


ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು