Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್) ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹಾಮನ ಸಂತಾನದವರು ಯಾರಂದರೆ - ಕೂಷ್, ವಿುಚ್ರಯಿಮ್, ಪೂತ್, ಕಾನಾನ್ ಎಂಬವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:6
15 ತಿಳಿವುಗಳ ಹೋಲಿಕೆ  

ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!


ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.


ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.


ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.


ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.


ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.


ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.


ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.


ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.


ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.


ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು