Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೂಷನು ನಿಮ್ರೋದನನ್ನು ಪಡೆದನು. ಇವನೇ ಪರಾಕ್ರಮದಲ್ಲಿ ಮೊದಲನೆಯ ಭೂರಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೂಷನು ನಿಮ್ರೋದನನ್ನು ಪಡೆದನು. ಅವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:8
6 ತಿಳಿವುಗಳ ಹೋಲಿಕೆ  

ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು.


ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.


ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.


ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.


ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು