Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಪೂರ್ವದಿಕ್ಕಿಗೆ ಪ್ರಯಾಣಮಾಡುತ್ತಾ ಇದ್ದಾಗ ಬಾಬಿಲೋನಿಯ ಕಾಡಿನ ಬಯಲು ಸೀಮೆ ಸಿಕ್ಕಿತು. ಅವರು ಅಲ್ಲೇ ನೆಲೆಸಲು ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಪೂರ್ವದಿಕ್ಕಿಗೆ ಮುಂದೆ ಮುಂದೆ ಪ್ರಯಾಣ ಮಾಡುತ್ತಿರುವಾಗ ಶಿನಾರ್ ದೇಶದಲ್ಲಿ ಬೈಲುಸೀಮೆ ಸಿಕ್ಕಲು ಅಲ್ಲೇ ವಾಸಮಾಡಿಕೊಂಡು ತಮ್ಮ ತಮ್ಮೊಳಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ಪೂರ್ವದಿಕ್ಕಿನಿಂದ ಪ್ರಯಾಣಮಾಡಿ ಶಿನಾರ್ ಪ್ರದೇಶದಲ್ಲಿ ಬಯಲು ಸೀಮೆಯನ್ನು ಕಂಡು ಅಲ್ಲೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:2
8 ತಿಳಿವುಗಳ ಹೋಲಿಕೆ  

ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,


ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.


ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.


ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು