Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹಾರಾನನು, ತನ್ನ ಜನ್ಮಭೂಮಿಯಲ್ಲಿ, ಬಾಬಿಲೋನಿನ ಊರ್ ಎಂಬ ಪಟ್ಟಣದಲ್ಲಿ, ತನ್ನ ತಂದೆಯಾದ ತೆರಹನು ಜೀವದಿಂದಿರುವಾಗಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹಾರಾನನು ಲೋಟನನ್ನು ಪಡೆದನು. ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಹತ್ತಿರವೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹಾರಾನನು ಬಾಬಿಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತುಹೋದನು. ಹಾರಾನನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಸ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆ ತೆರಹನಿಗಿಂತ ಮೊದಲು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:28
5 ತಿಳಿವುಗಳ ಹೋಲಿಕೆ  

ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.


ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.


ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು