Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಾರಯಳು ಬಂಜೆ, ಆಕೆಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸಾರಯಳು ಬಂಜೆಯಾಗಿದ್ದದರಿಂದ ಆಕೆಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸಾರಯಳಿಗೆ ಮಕ್ಕಳಿರಲಿಲ್ಲ, ಯಾಕೆಂದರೆ, ಆಕೆ ಬಂಜೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸಾರಯಳು ಬಂಜೆಯಾದದ್ದರಿಂದ ಆಕೆಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:30
14 ತಿಳಿವುಗಳ ಹೋಲಿಕೆ  

ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.


ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.


ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!


ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.


ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು