ಆದಿಕಾಂಡ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
4 ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
4 ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
4 ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
4 ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.
4 ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.