ಆದಿಕಾಂಡ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟುಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು. ಅಧ್ಯಾಯವನ್ನು ನೋಡಿ |