Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಜಿಪ್ಟನ್ನು ಪ್ರವೇಶಿಸುವುದಕ್ಕೆ ಮುಂಚೆಯೆ ತನ್ನ ಹೆಂಡತಿ ಸಾರಯಳಿಗೆ, “ನೀನು ಬಲು ಚೆಲುವಾದ ಹೆಣ್ಣು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಐಗುಪ್ತದೇಶದ ಹತ್ತಿರಕ್ಕೆ ಬಂದಾಗ, ತನ್ನ ಹೆಂಡತಿಯಾದ ಸಾರಯಳಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತನ್ನ ಹೆಂಡತಿ ಸಾರಯಳು ರೂಪವತಿಯಾಗಿರುವುದು ಅಬ್ರಾಮನಿಗೆ ತಿಳಿದಿತ್ತು. ಆದ್ದರಿಂದ ಈಜಿಪ್ಟಿಗೆ ಹೋಗುವ ಮೊದಲೇ, ಅಬ್ರಾಮನು ಸಾರಯಳಿಗೆ, “ನೀನು ರೂಪವತಿಯೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಈಜಿಪ್ಟನ್ನು ಸಮೀಪಿಸುತ್ತಿದ್ದಾಗ, ತನ್ನ ಹೆಂಡತಿ ಸಾರಯಳಿಗೆ, “ನೀನು ನೋಡುವುದಕ್ಕೆ ರೂಪವತಿಯೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:11
14 ತಿಳಿವುಗಳ ಹೋಲಿಕೆ  

ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾವಣ್ಯವತಿಯೂ ಆಗಿದ್ದಳು.


ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.


ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು.


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.


ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.


ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.


ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು