Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟಿನವರು ನಿನ್ನನ್ನು ನೋಡಿ, ನೀನು ನನ್ನ ಹೆಂಡತಿಯಾಗಿರಬಹುದೆಂದು ಊಹಿಸಿ, ನನ್ನನ್ನು ಕೊಂದು ನಿನ್ನನ್ನು ಜೀವದಿಂದ ಉಳಿಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; ಐಗುಪ್ತದೇಶದವರು ನಿನ್ನನ್ನು ಕಂಡು - ಈಕೆಯು ಇವನ ಹೆಂಡತಿ ಎಂದು ನನ್ನನ್ನು ಕೊಂದು ನಿನ್ನನ್ನು ಉಳಿಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಜಿಪ್ಟಿನ ಗಂಡಸರು ನಿನ್ನನ್ನು ನೋಡಿ, ‘ಈಕೆ ಇವನ ಹೆಂಡತಿ’ ಎಂದು ತಿಳಿದು ನಿನ್ನನ್ನು ಪಡೆದುಕೊಳ್ಳುವುದಕ್ಕಾಗಿ ನನ್ನನ್ನು ಕೊಂದು ನಿನ್ನನ್ನು ಜೀವಂತವಾಗಿ ಉಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗಿರುವುದರಿಂದ ಈಜಿಪ್ಟಿನವರು ನಿನ್ನನ್ನು ಕಂಡು, ‘ಈಕೆಯು ಅವನ ಹೆಂಡತಿ’ ಎಂದು ಹೇಳಿ, ನನ್ನನ್ನು ಕೊಂದುಹಾಕಿ, ನಿನ್ನನ್ನು ಉಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:12
6 ತಿಳಿವುಗಳ ಹೋಲಿಕೆ  

ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.


ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು