ಆದಿಕಾಂಡ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |