Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಅಬ್ರಾಮನ ಹೆಂಡತಿಯನ್ನು ಕರೆಸಿಕೊಂಡ ಕಾರಣ ಫರೋಹನಿಗೂ ಮತ್ತು ಅವನ ಮನೆಯವರಿಗೂ ಸರ್ವೇಶ್ವರ ದೊಡ್ಡ ದೊಡ್ಡ ಗಂಡಾಂತರಗಳನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿವಿುತ್ತ ಬಹಳ ಉಪದ್ರವಗಳನ್ನು ಉಂಟುಮಾಡಿ ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:17
8 ತಿಳಿವುಗಳ ಹೋಲಿಕೆ  

ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,


ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.


ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು