Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:7
55 ತಿಳಿವುಗಳ ಹೋಲಿಕೆ  

ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು.


ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.


ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,


ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.


‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ


ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.


ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.


ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.


ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.


ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.


ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.


ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.


ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.


“ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.


ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.


ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು


ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.


ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.


ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.


ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.


ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು