ಆದಿಕಾಂಡ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಬ್ರಾಮನು ತನ್ನದುದನ್ನೆಲ್ಲಾ ತೆಗೆದುಕೊಂಡು ಹೆಂಡತಿ ಮತ್ತು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ ಲೋಟನನ್ನೂ ಸಂಗಡ ಕರಕೊಂಡು ಐಗುಪ್ತ ದೇಶವನ್ನು ಬಿಟ್ಟು ಕಾನಾನ್‍ದೇಶದ ದಕ್ಷಿಣ ಪ್ರಾಂತ್ಯಕ್ಕೆ ಏರಿ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದುಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್ ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತೆಗೆದುಕೊಂಡು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ನೆಗೆವಕ್ಕೆ ಪ್ರಯಾಣಮಾಡಿದನು. ಅಧ್ಯಾಯವನ್ನು ನೋಡಿ |