Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:10
26 ತಿಳಿವುಗಳ ಹೋಲಿಕೆ  

ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,


ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.


ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.


ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.


ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.


ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.


ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.


ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.


ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.


ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.


ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.


ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.”


“ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು