Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಬ್ರಾಮನು ಕಾನಾನ್‍ದೇಶದಲ್ಲಿ ವಾಸಮಾಡಿದನು; ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ಗುಡಾರ ಹಾಕಿಸಿ ವಸತಿ ಮಾಡುತ್ತಾ ಸೊದೋವಿುಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:12
10 ತಿಳಿವುಗಳ ಹೋಲಿಕೆ  

ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.


ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,


ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.


ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.


ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.


ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು