Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ - ನೀನಿರುವ ಸ್ಥಳದಿಂದ ದಕ್ಷಿಣೋತ್ತರಪೂರ್ವಪಶ್ಚಿಮಗಳಿಗೆ ಕಣ್ಣೆತ್ತಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಲೋಟನು ಅಬ್ರಾಮನಿಂದ ಹೋದ ಮೇಲೆ ಯೆಹೋವ ದೇವರು ಅವನಿಗೆ, “ಈಗ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:14
6 ತಿಳಿವುಗಳ ಹೋಲಿಕೆ  

ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.


ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು