ಆದಿಕಾಂಡ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.