Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಹೋಗು, ನಿನ್ನ ಭೂಮಿಯಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:17
8 ತಿಳಿವುಗಳ ಹೋಲಿಕೆ  

ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು