Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಬ್ರಾಮನು ರಾತ್ರಿಯಲ್ಲಿ ಅವರಿಗೆ ವಿರೋಧವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ, ಅವರನ್ನು ಹೊಡೆದು, ದಮಸ್ಕದ ಉತ್ತರದಲ್ಲಿ ಹೋಬಾದವರೆಗೆ ಅವರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:15
14 ತಿಳಿವುಗಳ ಹೋಲಿಕೆ  

ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.


ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.


ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.


ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.


ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,


ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.


ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


“ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.


ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು