Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 ಈಗ ಲವಣ ಸಮುದ್ರ ಎನಿಸಿಕೊಳ್ಳುವ ಸಿದ್ದೀಮ್ ತಗ್ಗುಪ್ರದೇಶದಲ್ಲಿ ಒಂದುಗೂಡಿದ್ದ ಸೊದೋಮಿನ ಅರಸ ಬೆರಗ, ಗೊಮೋರದ ಅರಸ ಬಿರ್ಶಗ, ಅದ್ಮಾಹದ ಅರಸ ಶಿನಾಬ, ಚೆಬೋಯಿಮನ ಅರಸ ಶೆಮೇಬರ, ಬೆಲಗಿನ (ಅಂದರೆ ಚೋಗರದ) ಅರಸ - ಈ ಐವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ಈಗ ಲವಣಸಮುದ್ರವಾಗಿರುವ ಸಿದ್ದೀಮ್ ತಗ್ಗಿನೊಳಗೆ ಕೂಡಿದ್ದ ಸೊದೋವಿುನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯೀವಿುನ ಅರಸನಾದ ಶೆಮೇಬರನು, ಬೇಲಗಿನ ಅಂದರೆ ಚೋಗರದ ಅರಸನು ಇವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ರಾಜರುಗಳೆಲ್ಲ ಸೊದೋಮಿನ ರಾಜನಾದ ಬೆರಗನಿಗೂ ಗೊಮೋರದ ರಾಜನಾದ ಬಿರ್ಶಗನಿಗೂ ಅದ್ಮಾಹದ ರಾಜನಾದ ಶಿನಾಬನಿಗೂ ಚೆಬೋಯೀಮಿನ ರಾಜನಾದ ಶೆಮೇಬರನಿಗೂ ಚೋಗರ್ ಎಂಬ ಬೇಲಗಿನ ರಾಜನಿಗೂ ವಿರುದ್ಧವಾಗಿ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವರು ಸೊದೋಮಿನ ಅರಸ ಬೆರಗನೂ ಗೊಮೋರದ ಅರಸ ಬಿರ್ಶಗನೂ ಅದ್ಮಾಹದ ಅರಸ ಶಿನಾಬನಿಗೂ ಚೆಬೋಯಿಮಿನ ಅರಸ ಶೆಮೇಬರನಿಗೂ ಬೆಲಗಿನ ಅಂದರೆ, ಚೋಗರದ ಅರಸನಿಗೂ ವಿರೋಧವಾಗಿ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:2
12 ತಿಳಿವುಗಳ ಹೋಲಿಕೆ  

ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.


ಹಾದೀದ್, ಚೆಬೋಯಿಮ್, ನೆಬಲ್ಲಾಟ್,


ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.


ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು