22-23 ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.