ಆದಿಕಾಂಡ 14:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿನಗೆ ಸೇರಿದ ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ’ ಎಂದು ನೀನು ಹೇಳಬಾರದು. ಅಧ್ಯಾಯವನ್ನು ನೋಡಿ |