Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:1
65 ತಿಳಿವುಗಳ ಹೋಲಿಕೆ  

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


“ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.


ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.


ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.


ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;


ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.


ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.


ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.


ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.


ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.


ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.


ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.


ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.


ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.


(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)


ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;


ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.


ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,


ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.


ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.


ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.


ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.


ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.


ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.


ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.


ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.


ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.


ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.


ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು