Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳುಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಪಶುಗಳನ್ನು ಕಡಿದು ಎರಡೆರಡು ಹೋಳುಮಾಡಿ ತುಂಡಿಗೆ ತುಂಡನ್ನು ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಬ್ರಾಮನು ದೇವರಿಗೋಸ್ಕರ ಅವುಗಳನ್ನೆಲ್ಲ ತೆಗೆದುಕೊಂಡು ಬಂದನು. ಅಬ್ರಾಮನು ಅವುಗಳನ್ನು ಕತ್ತರಿಸಿ ಎರಡೆರಡು ಹೋಳು ಮಾಡಿದನು. ಆಮೇಲೆ ಅಬ್ರಾಮನು ತುಂಡಿಗೆ ತುಂಡನ್ನು ಎದುರಾಗಿಟ್ಟನು. ಅಬ್ರಾಮನು ಪಕ್ಷಿಗಳನ್ನು ಮಾತ್ರ ಎರಡೆರಡು ಹೋಳು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅನಂತರ ಅವನು ಇವುಗಳನ್ನೆಲ್ಲಾ ಯೆಹೋವ ದೇವರಿಗಾಗಿ ತೆಗೆದುಕೊಂಡು ಬಂದು ಎರಡೆರಡು ಹೋಳುಮಾಡಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು. ಆದರೆ ಅವನು ಪಕ್ಷಿಗಳನ್ನು ತುಂಡು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:10
6 ತಿಳಿವುಗಳ ಹೋಲಿಕೆ  

ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು.


ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು