Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:15
29 ತಿಳಿವುಗಳ ಹೋಲಿಕೆ  

ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.


ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.


ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.


ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.


ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.


ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.


“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.


ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.


ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.


ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.


ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.


ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.


“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.


ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.


ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು