Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಿರಿಗಿ ಅಬ್ರಾಮನು - ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು ಎಂದು ಹೇಳಲು ಯೆಹೋವನು ಅವನ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ಅಬ್ರಾಮನು, “ನೀವು ನನಗೆ ಸಂತಾನವನ್ನು ಕೊಡಲಿಲ್ಲ. ನನ್ನ ಮನೆಯಲ್ಲಿರುವ ದಾಸನೇ ಉತ್ತರಾಧಿಕಾರಿಯಾಗಿರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:3
10 ತಿಳಿವುಗಳ ಹೋಲಿಕೆ  

ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.


ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು.


ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು