ಆದಿಕಾಂಡ 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.