Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಕಾರಣ ಅಲ್ಲಿದ್ದ ಬಾವಿಗೆ “ಲಹೈರೋಯಿ” (ನನ್ನನ್ನು ನೋಡುವ ಜೀವಸ್ವರೂಪನ ಬಾವಿ) ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಸಂಗತಿಯಿಂದ ಅಲ್ಲಿರುವ ಬಾವಿಗೆ ಲಹೈರೋಯಿ ಬಾವಿ ಎಂದು ಹೆಸರಾಯಿತು; ಅದು ಕಾದೇಶಿಗೂ ಬೆರೆದಿಗೂ ನಡುವೆ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಆ ಬಾವಿಗೆ ಬೀರ್‌ಲಹೈರೋಯಿ (ಬೀರ್‌ಲಹೈರೋಯಿ. ಇದರರ್ಥ: “ನನ್ನನ್ನು ನೋಡುವ ಜೀವಸ್ವರೂಪನ ಬಾವಿ.”) ಎಂದು ಹೆಸರಾಯಿತು. ಈ ಬಾವಿಯು ಕಾದೇಶಿಗೂ ಬೆರೆದಿಗೂ ನಡುವೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಆ ಬಾವಿಗೆ, ಬೇರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:14
7 ತಿಳಿವುಗಳ ಹೋಲಿಕೆ  

ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.


ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.


ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.


ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.


ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.


ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು