ಆದಿಕಾಂಡ 16:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ - ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಷ್ಟೆ; ನೀನು ನನ್ನ ದಾಸಿಯ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು. ಅಧ್ಯಾಯವನ್ನು ನೋಡಿ |