Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನೂ ನಿನ್ನ ಹಿಂದೆ ಬರುವ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ನಿಬಂಧನೆಯು ಯಾವದಂದರೆ - ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:10
29 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.


ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು


ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.


ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.


ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.


ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.


ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.


ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.


ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು.


ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.


ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.


ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.


ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.


“ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು