Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಇಷ್ಮಾಯೇಲನು ಇದ್ದಾನಲ್ಲವೆ? ನಿಮ್ಮ ಸಮ್ಮುಖದಲ್ಲಿ ಅವನು ಬಾಳಿದರೆ ಸಾಕಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಷ್ಮಾಯೇಲನಿದ್ದಾನಲ್ಲಾ, ಅವನೇ ನಿನ್ನ ದಯೆಹೊಂದಿ ಬಾಳಲಿ ಎನ್ನಲು ದೇವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ಅಬ್ರಹಾಮನು ದೇವರಿಗೆ, “ಇಷ್ಮಾಯೇಲನೇ ನಿನ್ನ ಆಶೀರ್ವಾದವನ್ನು ಹೊಂದಿಕೊಂಡು ಜೀವಿಸಬಾರದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಬ್ರಹಾಮನು ದೇವರಿಗೆ, “ಇಷ್ಮಾಯೇಲನು ನಿನ್ನ ಆಶೀರ್ವಾದದಲ್ಲಿ ಬದುಕಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:18
10 ತಿಳಿವುಗಳ ಹೋಲಿಕೆ  

ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.


ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.


“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.


ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.


ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು