ಆದಿಕಾಂಡ 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.