ಆದಿಕಾಂಡ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಬ್ರಹಾಮನು ಮಧ್ಯಾಹ್ನದಲ್ಲಿ ಮಮ್ರೇತೋಪಿನ ತನ್ನ ಗುಡಾರದ ಬಾಗಲಲ್ಲಿ ಕೂತಿರುವಾಗ ಯೆಹೋವನು ಅವನಿಗೆ ದರ್ಶನಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು. ಅಧ್ಯಾಯವನ್ನು ನೋಡಿ |