ಆದಿಕಾಂಡ 18:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕಾತನು - ಬರುವ ವರುಷದ ಇದೇ ಕಾಲದಲ್ಲಿ ನಾನು ತಪ್ಪದೆ ತಿರಿಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು ಅಂದನು. ಆ ಮಾತು ಹಿಂದೆ ಗುಡಾರದ ಬಾಗಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಅಧ್ಯಾಯವನ್ನು ನೋಡಿ |