Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಬ್ರಹಾಮನಿಗೆ, ಸರ್ವೇಶ್ವರ “ 'ಸಾರಳು ತಾನು ಮುದುಕಿಯಾದ ಕಾರಣ ಹೆರಲು ಸಾಧ್ಯವೆ' ಎಂದು ನಕ್ಕಿದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಅಬ್ರಹಾಮನಿಗೆ - ಸಾರಳು ನಕ್ಕು ಮುದುಕಿಯಾದ ನಾನು ಮಗುವನ್ನು ಹೆರುವದಾದೀತೇ ಎಂದು ಹೇಳಿದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಯೆಹೋವನು ಅಬ್ರಹಾಮನಿಗೆ, “ನಾನು ಹೇಳುವುದನ್ನು ಸಾರಳು ನಂಬುತ್ತಿಲ್ಲ. ಆಕೆಯು ನಗುತ್ತಾ ತನ್ನೊಳಗೆ, ‘ನನಗೆ ಮಕ್ಕಳಾಗದಷ್ಟು ವಯಸ್ಸಾಗಿದೆ’ ಎಂದು ಹೇಳಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರು ಅಬ್ರಹಾಮನಿಗೆ, “ನಾನು ಮುದಿಪ್ರಾಯದವಳಾಗಿ ಮಗುವನ್ನು ಹೆರುವುದು ನಿಜವೋ? ಎಂದುಕೊಂಡು ಸಾರಳು ಏಕೆ ನಕ್ಕಳು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:13
5 ತಿಳಿವುಗಳ ಹೋಲಿಕೆ  

ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.


ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.


ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.


ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು