Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಯೆಹೋವನು ತನ್ನೊಳಗೆ - ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವದು ಸರಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ತನ್ನೊಳಗೆ ಹೀಗೆಂದುಕೊಂಡನು: “ನಾನು ಈಗ ಮಾಡುವ ಕಾರ್ಯವನ್ನು ಅಬ್ರಹಾಮನಿಗೆ ತಿಳಿಸಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:17
10 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.


ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.


ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.


ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.


ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು