ಆದಿಕಾಂಡ 18:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು. ಅಧ್ಯಾಯವನ್ನು ನೋಡಿ |