Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಸರ್ವೇಶ್ವರ, “ಸೊದೋಮಿನಲ್ಲಿ ಐವತ್ತು ಮಂದಿ ಸಜ್ಜನರು ನನಗೆ ಸಿಕ್ಕಿದರೆ ಅವರ ನಿಮಿತ್ತ ಊರನ್ನೆಲ್ಲಾ ಉಳಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೊದೋವಿುನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿವಿುತ್ತ ಊರನ್ನೆಲ್ಲಾ ಉಳಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಮೇಲೆ ಯೆಹೋವನು, “ನಾನು ಸೊದೋಮಿನಲ್ಲಿ ಐವತ್ತು ಮಂದಿ ನೀತಿವಂತರನ್ನು ಕಂಡರೆ, ನಾನು ಇಡೀ ಪಟ್ಟಣವನ್ನೇ ಉಳಿಸಿ ಕಾಪಾಡುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಯೆಹೋವ ದೇವರು, “ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ, ಅವರಿಗೋಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:26
8 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


“‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು