Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶಮಾಡುವಿರೋ?” ಎಂದು ಕೇಳಲು ಸರ್ವೇಶ್ವರ, “ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಒಂದು ವೇಳೆ ಐವತ್ತು ಮಂದಿ ನೀತಿವಂತರಿಗೆ ಐದು ಮಂದಿ ಕಡಿಮೆಯಾಗಿದ್ದಾರು; ಐದು ಮಂದಿ ಕಡಿಮೆಯಾದದ್ದಕ್ಕೆ ಪಟ್ಟಣವನ್ನೆಲ್ಲಾ ನಾಶಮಾಡುವಿಯಾ ಎಂದು ಹೇಳಲು ಯೆಹೋವನು - ಅಲ್ಲಿ ನಾಲ್ವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:28
7 ತಿಳಿವುಗಳ ಹೋಲಿಕೆ  

ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.


ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.


ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;


“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು