Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೊಗ್ಗಿ ನಮಸ್ಕರಿಸಿ - ಸ್ವಾವಿು, ದಯವಿರಲಿ; ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:3
8 ತಿಳಿವುಗಳ ಹೋಲಿಕೆ  

ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.


ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು.


ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.


ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.


ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.


ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು