Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ - ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:6
15 ತಿಳಿವುಗಳ ಹೋಲಿಕೆ  

ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”


ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.


ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.


ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.


ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.


ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.


ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.


ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು