ಆದಿಕಾಂಡ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗು ಅಟ್ಟ ಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡಿ ಮುಗಿಸುವವರೆಗೂ ಅವನೇ ಹತ್ತಿರ ನಿಂತು ಉಪಚಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತರುವಾಯ ಅಬ್ರಹಾಮನು ಹಾಲುಮೊಸರನ್ನೂ ಅಟ್ಟ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡುವವರೆಗೂ ಅವನು ಹತ್ತಿರ ನಿಂತುಕೊಂಡು ಉಪಚಾರ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತರುವಾಯ ಮೊಸರನ್ನೂ, ಹಾಲನ್ನೂ, ಪಕ್ವಮಾಡಿದ ಮಾಂಸವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು. ಅವನಾದರೋ ಮರದ ಕೆಳಗೆ ಅವರ ಹತ್ತರ ನಿಂತುಕೊಂಡನು. ಅವರು ಊಟಮಾಡಿದರು. ಅಧ್ಯಾಯವನ್ನು ನೋಡಿ |