Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಳಿಕ ಅವರು ಅವನನ್ನು - ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ ಎಂದು ಕೇಳಲು ಅವನು - ಅಗೋ, ಗುಡಾರದಲ್ಲಿದ್ದಾಳೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು. ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:9
8 ತಿಳಿವುಗಳ ಹೋಲಿಕೆ  

ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.


ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.


ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.


ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.


ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.


ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.


ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು