Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಪಟ್ಟಣಗಳನ್ನು, ಇಡೀ ಆ ಬಯಲುಸೀಮೆಯನ್ನೂ ಅವುಗಳ ನಿವಾಸಿಗಳನ್ನೂ ಹೊಲಗಳ ಬೆಳೆಯೆಲ್ಲವನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂವಿುಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:25
15 ತಿಳಿವುಗಳ ಹೋಲಿಕೆ  

ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.


ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.


ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.


ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.


ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.


“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು