ಆದಿಕಾಂಡ 19:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
29 ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.
29 ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.
ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.
ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.