ಆದಿಕಾಂಡ 19:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅನ್ನಲು ಅವನು ಅವರನ್ನು ಬಹಳ ಬಲವಂತಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು. ಅಧ್ಯಾಯವನ್ನು ನೋಡಿ |